ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದಿದ್ದರೆ ಕ್ರಮ: ಆರೋಗ್ಯ ಸಚಿವ ಡಾ. ಸುಧಾಕರ್

Prasthutha|

- Advertisement -

ಬೆಂಗಳೂರು: ಕೊವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡದಿದ್ದರೆ ಕೆಪಿಎಂಇ ಕಾಯ್ದೆಯಡಿ ಕ್ರಮಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡದ ಬಗ್ಗೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ವಿರುದ್ಧ ದೂರುಗಳು ಬಂದಿವೆ. ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಖಾಸಗಿ ಆಸ್ಪತ್ರೆಯ ಐಸೋಲೇಟ್ ವಾರ್ಡ್ ಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಲೇಬೇಕು ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

- Advertisement -

ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆಕಾಣುತ್ತಿದೆ. ಇದರ ನಡುವೆ ಕೆಲ ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕೊಡಲು ಹಿಂದೇಟು ಹಾಕುತ್ತಿವೆ. ಈ ಬಗ್ಗೆ ದೂರುಗಳು ಸಾರ್ವಜನಿಕರಿಂದ ವ್ಯಕ್ತವಾಗಿದ್ದು ಇದರ ಬಗ್ಗೆ ಕ್ರಮಕೈಗೊಳ್ಳಲು ಸಚಿವ ಡಾ.ಸುಧಾಕರ್ ಮುಂದಾಗಿದ್ದಾರೆ.



Join Whatsapp