Home ಟಾಪ್ ಸುದ್ದಿಗಳು ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸಂತ್ರಸ್ತರು ದೂರು ನೀಡಿದ್ರೆ ಕ್ರಮ: ಪರಮೇಶ್ವರ್

ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಸಂತ್ರಸ್ತರು ದೂರು ನೀಡಿದ್ರೆ ಕ್ರಮ: ಪರಮೇಶ್ವರ್

ತುಮಕೂರು: ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಕಿರುಕುಳ ನಡೆಸುತ್ತಿರುವ ಕುರಿತು ದೂರುಗಳು ಬರುತ್ತಿವೆ. ಸಂತ್ರಸ್ತರು ದೂರು ನೀಡಿದ್ರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ತುಮಕೂರಿನ ಸಿದ್ದಗಂಗಾಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ.

ಹಲವಡೆ ಮೈಕ್ರೋ ಫೈನಾನ್ಸ್ ಕಂಪನಿಗಳು ಗೈಡ್ ಲೈನ್ಸ್ ಉಲ್ಲಂಘನೆ ಮಾಡುತ್ತಿದ್ದಾರೆ. ಫೈನಾನ್ಸ್ ಕಂಪನಿಗಳ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತದೆ. ಲೈಸೆನ್ಸ್ ಇಲ್ಲದವರ ಬಗ್ಗೆ ಹಣಕಾಸು ಇಲಾಖೆ ಸರ್ವೆ ಮಾಡಬೇಕು ಎಂದರು.

ರಾಜ್ಯದಲ್ಲಿ ಎಲ್ಲಿಯಾದರೂ ಮೈಕ್ರೋ ಫೈನಾನ್ಸ್ ಕಂಪನಿಯವರು ಕಿರುಕುಳ ನೀಡಿದ್ರೆ ಸಂತ್ರಸ್ತರು ದೂರು ನೀಡಿದ್ರೆ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Join Whatsapp
Exit mobile version