Home ಟಾಪ್ ಸುದ್ದಿಗಳು ಸಚಿವ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಸಚಿವ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಟ್ವಿಟ್ಟರ್ ಖಾತೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ರೀತಿಯಲ್ಲಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ಕುಮಾರ್ ಅವರು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ಒಂದು ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.


ಜೂನ್ 11 ರಂದು ಸರಣಿ ಟ್ವೀಟ್ ಮಾಡಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ’ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿತು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ’ ಎಂದಿದ್ದರು.


ಚೇತನ್ ನೀಡಿದ ದೂರಿನ ಅನ್ವಯ ಬೆಂಗಳೂರು ನ್ಯಾಯಾಲಯವು ಜೂನ್ 24ರ ಸಚಿವರಿಗೆ ನೋಟಿಸ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆ ಜುಲೈ 14 ಕ್ಕೆ ನಿಗದಿಪಡಿಸಲಾಗಿದೆ. ಮಾನನಷ್ಟ ಮೊಕದ್ದಮೆ 1 ರೂಪಾಯಿ ಹೊರತುಪಡಿಸಿ, ಬೇಷರತ್ತಾಗಿ ಕ್ಷಮೆಯಾಚಿಸಲು ಸಚಿವರಿಗೆ ನಿರ್ದೇಶಿಸಬೇಕು ಎಂದು ಚೇತನ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ್ಯ ಮತ್ತು ಜಾತಿವಾದದ ವಿರುದ್ಧ ಪೋಸ್ಟ್ ಹಾಕಿದ್ದಕ್ಕಾಗಿ ನಟ ಚೇತನ್ ಕುಮಾರ್ ಅವರನ್ನು ಸಚಿವ ಶಿವರಾಮ್ ಹೆಬ್ಬಾರ್ ಟೀಕಿಸಿದ್ದರು.

Join Whatsapp
Exit mobile version