ಬ್ರಾಹ್ಮಣ್ಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ವಿಚಾರ | ವಿಚಾರಣೆಗಾಗಿ ಬಸವನಗುಡಿ ಠಾಣೆಗೆ ಹಾಜರಾದ ನಟ ಚೇತನ್

Prasthutha: June 16, 2021

ಬೆಂಗಳೂರು: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಲಾದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣ ಸಂಬಂಧ ನಟ ಚೇತನ್ ಬಸವನಗುಡಿ ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.

ನಿನ್ನೆಯಷ್ಟೇ ಪ್ರಕರಣ ಸಂಬಂಧ ಬಸವನಗುಡಿ ಠಾಣೆ ಪೊಲೀಸರಿಂದ ನೋಟೀಸ್ ಪಡೆದಿದ್ದ ಚೇತನ್ ಇಂದು ವಿಚಾರಣೆಗಾಗಿ ಠಾಣೆಗೆ ಹಾಜರಾಗಿದ್ದಾರೆ. ನಟ ಚೇತನ್ ಅವರು ಬ್ರಾಹ್ಮಣರ ವಿರುದ್ಧ ನೀಡಿರುವ ಹೇಳಿಕೆ ಸಂಬಂಧ ಪಿಎಸ್ಐ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣದ ಪೋಸ್ಟ್ ವೊಂದರಲ್ಲಿ ಚೇತನ್ ಅವರು ತಮ್ಮ ಸಮುದಾಯದ ಬಗ್ಗೆ ಕೆಟ್ಟದ್ದಾಗಿ ಬಿಂಬಿಸಿ ಹೇಳಿಕೆ ನೀಡಿದ್ದಾಗಿ ಬ್ರಾಹ್ಮಣ ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ಎಂಬವರು ಬಸವನಗುಡಿ ಠಾಣೆಗೆ ದೂರು ದಾಖಲಿಸಿದ್ದರು. ಅದರಂತೆ ಕಲಂ ಕಲಂ 153B, 295A ಅಡಿ‌ ಪ್ರಕರಣ ದಾಖಲಿಸಲಾಗಿತ್ತು.

‘ಆ ದಿನಗಳು’ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ನೀಡಿದ್ದ ಬ್ರಾಹ್ಮಣ್ಯ ವಿರೋಧಿ ಹೇಳಿಕೆಯು ಪರ-ವಿರೋಧ ಚರ್ಚೆಗೂ ಕಾರಣವಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ