ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸ್ ವಶಕ್ಕೆ

Prasthutha|

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.

- Advertisement -


ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ವಿಜಯನಗರ ಎಸಿಪಿ ಚಂದನ್ ತಂಡ ಮೈಸೂರಿನ ಫಾರ್ಮ್ ​​ಹೌಸ್​ ನಲ್ಲಿ ನಟ ದರ್ಶನ್ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

Join Whatsapp
Exit mobile version