ಅಧಿಕೃತವಾಗಿ ‘ಕೈ’ ಹಿಡಿದ ನಟ, ನಿರ್ದೇಶಕ ಎಸ್. ನಾರಾಯಣ್

Prasthutha|

ಬೆಂಗಳೂರು:  ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟನಾಗಿ ಗುರುತಿಸಿಕೊಂಡಿರುವ ಎಸ್​ ನಾರಾಯಣ್ ಅವರು ಇಂದು ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ  ಸೇರ್ಪಡೆಯಾಗಿದ್ದಾರೆ.

- Advertisement -

ಎಸ್​ ನಾರಾಯಣ್​ ಅವರು ಕಾಂಗ್ರೆಸ್​ ಸೇರ್ಪಡೆಗೊಂಡ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಹು ಮುಖ ಪ್ರತಿಭೆ, ಸರಳ ವ್ಯಕ್ತಿತ್ವದ ನಾರಾಯಣ್ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಅವರು ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ವಾಣಿಜ್ಯ ಮಂಡಳಿ ಸೇರಿದಂತೆ ಸಮುದಾಯದ ಸಂಘಟನೆ ಮಾಡಲಿದ್ದಾರೆ. ಇನ್ನು ಪಕ್ಷಕ್ಕೆ ಸೇರುವವರ ದೊಡ್ಡ ಪಟ್ಟಿ ಇದೆ. ಅವರೆಲ್ಲಾ ಈಗಾಗಲೇ ಅರ್ಜಿ ಹಾಕಿದ್ದಾರೆ. ಅದಕ್ಕೆ ಸಮಯ ನಿಗದಿ ಮಾಡಬೇಕಿದೆ ಎಂದು ಹೇಳಿದರು.

ಸೇರ್ಪಡೆ ಬಳಿಕ ಮಾತನಾಡಿದ ಎಸ್​ ನಾರಾಯಣ್ , ರಾಜಕೀಯ ಪ್ರವೇಶ ಎಂದಾಗ ನಾನು ಆಯ್ಕೆ‌ಮಾಡಿಕೊಂಡಿದ್ದು ಕಾಂಗ್ರೆಸ್ ಪಕ್ಷ. ದೇಶಕ್ಕಾಗಿ ಕಾಂಗ್ರೆಸ್ ತ್ಯಾಗ ಬಲಿದಾನ ಎಲ್ಲವನ್ನೂ ಕೊಟ್ಟಿದೆ. ಬಡವನಿಗೆ, ದಲಿತನಿಗೆ, ಹಿಂದುಳಿದವರ ಧ್ವನಿ ಈ ಕಾಂಗ್ರೆಸ್. ಪಕ್ಷದ ಜಾತ್ಯತೀತ ಸಿದ್ದಾಂತಗಳು ನನಗೆ ಇಷ್ಟ ಆಯಿತು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ. ನಮ್ಮಲ್ಲರ ಗುರಿ 2023ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಪಕ್ಷಕ್ಕಾಗಿ ದುಡಿಯುತ್ತೇನೆ. ಕೊಟ್ಟ ಮಾತಿನಂತೆ ಕೆಲಸ ಮಾಡುತ್ತೇನೆ ಎಂದರು.

- Advertisement -

ಇದೇ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಣ ತಿಮ್ಮಯ್ಯ ಪುರ್ಲೆ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು.



Join Whatsapp