ಮುಂಬೈ: ಬಾಲಿವುಡ್ ನಟ ಗೋವಿಂದ ಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್ ನಿಂದ ಮಿಸ್ ಫೈರ್ ಆಗಿ ಗಾಯವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
“ಗೋವಿಂದ ಕೋಲ್ಕತ್ತಾಗೆ ಹೊರಡಲು ತಯಾರಾಗುತ್ತಿದ್ದರು. ಅವರು ತಮ್ಮ ಪರವಾನಗಿ ಪಡೆದ ರಿವಾಲ್ವರ್ ನ್ನು ಕಬೋರ್ಡ್ನಲ್ಲಿ ಇಟ್ಟುಕೊಂಡಿದ್ದರು. ಅದು ಅವರ ಕೈಯಿಂದ ಬಿದ್ದು ಗುಂಡು ಅವರ ಕಾಲಿಗೆ ತಗುಲಿದೆ. ವೈದ್ಯರು ಬುಲೆಟ್ ನ್ನು ತೆಗೆದಿದ್ದಾರೆ” ಎಂದು ಅವರ ಮ್ಯಾನೇಜರ್ ʼಎಎನ್ಐʼಗೆ ತಿಳಿಸಿದ್ದಾರೆ.
ಕೂಡಲೇ ಅವರನ್ನು ಮುಂಬಯಿಯ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲು ಮಾಡಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ