ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈಗ ಜಗ್ಗೇಶ್ ಕತ್ತಲ್ಲೂ ಹುಲಿ ಉಗುರು ಇದೆ ಎಂದು ಸ್ವತಃ ಅವರೇ ಈ ವಿಚಾರವನ್ನು ಒಪ್ಪಿಕೊಂಡಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆ ಒಂದಕ್ಕೆ ಜಗ್ಗೆಶ್ ಅವರು ಸಂದರ್ಶನ ನಿಡಿದ್ದರು. ಈ ವೇಳೆ ನನಗೆ 20 ವರ್ಷ ಆದಾಗ ನನ್ನಮ್ಮ ನನ್ನ ಮಗ ಹುಲಿ ಇದ್ದಂಗೆ ಇರಬೇಕು ಅಂತ ಹೇಳಿ ಒರಿಜಿನಲ್ ಹುಲಿ ಉಗುರಿನಲ್ಲಿ ಈ ಲಾಕೆಟ್ ಇರುವ ಸರ ಮಾಡಿಸಿ ಹಾಕಿದ್ದರು ಎಂದಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಇದನ್ನು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಹಲವರು, ವರ್ತೂರ್ ಸಂತೋಷ್ ಗೆ ಒಂದು ನ್ಯಾಯ, ಜಗ್ಗೇಶ್ ಗೆ ಒಂದು ನ್ಯಾಯ. ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರ ಬಂಧನ ಯಾವಾಗ? ಎಂದು ಪ್ರಶ್ನಿಸುತ್ತಿದ್ದಾರೆ.