Home ಟಾಪ್ ಸುದ್ದಿಗಳು ನಟ ಕೆ ಶಿವರಾಮ್ ಗೆ ಹೃದಯಾಘಾತ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ನಟ ಕೆ ಶಿವರಾಮ್ ಗೆ ಹೃದಯಾಘಾತ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಂಗಳೂರು: ನಟ ಕೆ ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಶಿವರಾಮ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಇನ್ನೂ ಹಲವು ಕನ್ನಡ ಸಿನಿಮಾಗಳಲ್ಲಿ ಕೆ ಶಿವರಾಮ್ ನಟಿಸಿದ್ದಾರೆ.


ಶಿವರಾಮ್ ಅವರ ಅಳಿಯ ಭರತ್ ನೀಡಿರುವ ಮಾಹಿತಿಯಂತೆ, 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಆರೋಗ್ಯ ಚಿಂತಾಜನಕ ಆಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರಿಗೆ ಡಯಾಲಿಸಿಸ್ ನೀಡಲಾಗುತ್ತಿದೆ. ಶಿವರಾಮ್ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದಾರೆ ಎಂದಿದ್ದಾರೆ.


ಕೆ ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ನಿವೃತ್ತರಾದ ಬಳಿಕ ರಾಜಕೀಯದಲ್ಲಿ ಸಕ್ರಿಯರಾಗಿದ್ದ ಕೆ ಶಿವರಾಮ್, 2013 ರಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದರು, ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು, 2016ರ ಬಳಿಕ ಬಿಜೆಪಿ ಪಕ್ಷ ಸೇರಿದ್ದರು.

Join Whatsapp
Exit mobile version