ನವದೆಹಲಿ: ಭಾರತ್ ಜೋಡೊ ಯಾತ್ರೆ ಶನಿವಾರ ರಾಷ್ಟ್ರ ರಾಜಧಾನಿ ದೆಹಲಿಯನ್ನು ಪ್ರವೇಶಿಸಿದ್ದು, ನಟ, ರಾಜಕಾರಣಿ ಕಮಲ್ ಹಾಸನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ.
ಕಮಲ್ ಹಾಸನ್ ಅವರು ಕಳೆದ ವಾರ ಎಂಕೆಎಂ ಕಚೇರಿಯಲ್ಲಿ ಮಾತನಾಡಿದ ಸಂದರ್ಭ, ಡಿಸೆಂಬರ್ 24ರಂದು ರಾಷ್ಟ್ರ ರಾಜಧಾನಿಯಲ್ಲಿ ಸಾಗಲಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ರಾಹುಲ್ ಗಾಂಧಿ ಆಹ್ವಾನಿಸಿರುವುದಾಗಿ ತಿಳಿಸಿದ್ದರು.
ಜೈರಾಮ್ ರಮೇಶ್, ಪವನ್ ಖೇರಾ, ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಹಲವಾರು ಪಕ್ಷದ ನಾಯಕರು ಗಾಂಧಿಯವರೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ರಾಹುಲ್ ಜೊತೆಗೂಡಿದ್ದಾರೆ.