ಮೈಸೂರು ಸ್ವಚ್ಛತಾ ರಾಯಭಾರಿಯಾಗಿ ನಟ ಮಂಡ್ಯ ರಮೇಶ್ ಆಯ್ಕೆ

Prasthutha|

ಮೈಸೂರು: ಮೈಸೂರು ಸ್ವಚ್ಛತಾ ರಾಯಭಾರಿಯಾಗಿ ಖ್ಯಾತ ನಟ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement -


ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರನ್ನು ಮತ್ತೆ ಸ್ವಚ್ಛ ನಗರವನ್ನಾಗಿ ಮಾಡಲು ಮತ್ತು ಸ್ವಚ್ಛ ನಗರಿ ಪ್ರಶಸ್ತಿಯನ್ನು ಪಡೆಯಲು ಖ್ಯಾತ ನಟ ಮಂಡ್ಯ ರಮೇಶ್ ಅವರನ್ನು ಸ್ವಚ್ಛತಾ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ನಟ ಮಂಡ್ಯ ರಮೇಶ್ ಪಾಲಿಕೆಯ ಈ ಆಹ್ವಾನವನ್ನು ಒಪ್ಪಿಕೊಂಡಿದ್ದಾರೆ.


ಪಾರಂಪರಿಕ ನಗರಿ ಮೈಸೂರು ಕಳೆದ ಕೆಲವು ವರ್ಷಗಳ ಹಿಂದೆ ಭಾರತದ ಸ್ವಚ್ಛ ನಗರಗಳ ಪೈಕಿ ಪ್ರಥಮ ಸ್ಥಾನದಲ್ಲಿತ್ತು. 2015 ಮತ್ತು 2016 ರಲ್ಲಿ ಸತತ ಎರಡು ಬಾರಿ ಸ್ವಚ್ಛತಾ ನಗರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಆದರೆ ನಂತರದ ವರ್ಷಗಳಲ್ಲಿ ಮೈಸೂರಿಗೆ ಪ್ರಶಸ್ತಿ ಸಿಗದೇ ನಿರಾಸೆಯಾಗಿತ್ತು. 2022 ರಲ್ಲಿ ಸ್ವಚ್ಛ ನಗರಗಳ ಪೈಕಿ 8ನೇ ಸ್ಥಾನ ಪಡೆದಿತ್ತು.



Join Whatsapp