ಪ್ರತಿ ಜಿಲ್ಲೆಗೂ ಅಪ್ಪು ಆ್ಯಂಬುಲೆನ್ಸ್: ನಟ ಪ್ರಕಾಶ್ ರಾಜ್ ಕೊಡುಗೆ

Prasthutha|

ಮೈಸೂರು: ಅಪ್ಪು ಎಕ್ಸ್ ಪ್ರೆಸ್ ಎಂಬ ಆ್ಯಂಬುಲೆನ್ಸ್ ಅನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ನಮ್ಮ ಫೌಂಡೇಷನ್ ನೀಡಲಿದೆ ಎಂದು ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

- Advertisement -


ನಗರದ ಪಾರಂಪರಿಕ, ಶತಮಾನ ಕಂಡ ಮಿಷನ್ ಆಸ್ಪತ್ರೆಗೆ ಅಪ್ಪು ಎಕ್ಸ್’ಪ್ರೆಸ್ ಆ್ಯಂಬುಲೆನ್ಸ್ ನೀಡಿದ ಬಳಿಕ ಮಾತನಾಡಿದ ಅವರು, ಆ್ಯಂಬುಲೆನ್ಸ್ ಸಕಾಲಕ್ಕೆ ಸಿಕ್ಕಿದ್ದರೆ ಅಪ್ಪು ಬದುಕುತ್ತಿದ್ದರೇನೋ ಗೊತ್ತಿಲ್ಲ, ಸಕಾಲಕ್ಕೆ ಆ್ಯಂಬುಲೆನ್ಸ್ ದೊರಕದ ಸ್ಥಿತಿ ಜನ ಸಾಮಾನ್ಯರಿಗೆ ಬರಬಾರದು ಎಂಬ ಉದ್ದೇಶದಿಂದ ಪುನೀತ್ ರಾಜ್ ಕುಮಾರ ಹೆಸರಿನಲ್ಲಿ ಅಪ್ಪು ಎಕ್ಸ್’ಪ್ರೆಸ್ ಎಂಬ ಆ್ಯಂಬುಲೆನ್ಸ್ ಅನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ನೀಡಲಾಗುತ್ತಿದೆ. ಈ ಕೆಲಸಕ್ಕೆ ಪುನೀತ್ ರಾಜಕುಮಾರ್ ಅವರ ಮಾನವೀಯತೆಯ ಕೆಲಸವೇ ಸ್ಫೂರ್ತಿಯಾಗಿದೆ ಎಂದು ನಟ ಪ್ರಕಾಶ್ ರಾಜ್ ಹೇಳಿದರು.

Join Whatsapp