ನಟ ಪುನೀತ್ ರಾಜಕುಮಾರ್ ಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಘೋಷಣೆ

Prasthutha|

ಚಿತ್ರದುರ್ಗ : ನಟ ಪುನೀತ್ ರಾಜ್ ಕುಮಾರ್ ಅವರಿಗೆ ಚಿತ್ರದುರ್ಗದ ಮುರುಘಾಮಠ ಕೊಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಮುರುಘಾಶ್ರೀಗಳು ಇಂದು ಘೋಷಣೆ ಮಾಡಿದ್ದಾರೆ.

- Advertisement -

ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಈ ಬಗ್ಗೆ ಘೋಷಣೆ ಆಗಿದೆ. ಬಸವಶ್ರೀ ಪ್ರಶಸ್ತಿ ಐದು ಲಕ್ಷ ರೂ. ನಗದನ್ನು ಒಳಗೊಂಡಿದೆ. ಬರುವ ಬಸವ ಜಯಂತಿ ದಿನ ಬಸವಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಮುರುಘಾಮಠದ ಅನುಭವ ಮಂಟಪದಲ್ಲಿ ಈ ಸಮಾರಂಭ ನಡೆಯಲಿದ್ದು, ಪುನೀತ್ ಪರವಾಗಿ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ನವೆಂಬರ್ 10ರಂದು ಪುನೀತ್ ಮನೆಗೆ ಮುರುಘಾಶ್ರೀ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

ಅದ್ಭುತ ನಟನೆ ಮೂಲಕ ಗಮನ ಸೆಳೆದ ಪುನೀತ್ ರಾಜ್ ಕುಮಾರ್ ಅವರಿಗೆ ಸಾಕಷ್ಟು ಪ್ರಶಸ್ತಿಗಳು ಒಲಿದಿವೆ. ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗಬೇಕು ಎಂಬುದು ಅನೇಕರ ಒತ್ತಾಯವಾಗಿತ್ತು. ಅವರ ಮರಣಾ ನಂತರ ಈ ಕೂಗು ಮತ್ತಷ್ಟು ಹೆಚ್ಚಿದೆ. ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಈ ಬಗ್ಗೆ ಆಗ್ರಹಿಸಿದ್ದರು.

Join Whatsapp