Home ಟಾಪ್ ಸುದ್ದಿಗಳು ನಟ ರಜನಿಕಾಂತ್​​ಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ನಟ ರಜನಿಕಾಂತ್​​ಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು.

ಈ ವೇಳೆ ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗಿದೆ. ಹೃದಯರೋಗ ತಜ್ಞ ಸಾಯಿ ಸತೀಶ್ ಅವರು ರಜನಿ ಅವರನ್ನು ಪರೀಕ್ಷೆ ಮಾಡಿದ್ದಾರೆ.

ಈಗ ರಜನಿಕಾಂತ್ ಆರೋಗ್ಯ ಸುಸ್ಥಿರವಾಗಿದೆ.

ಇಂದು (ಅಕ್ಟೋಬರ್ 1) ಅಪೋಲೋ ಆಸ್ಪತ್ರೆಯಲ್ಲಿ ರಜನಿಕಾಂತ್ ಅವರ ಹೃದಯದ ಪರೀಕ್ಷೆ ನಡೆಯಲಿದೆ. ಈ ವೇಳೆ ಕೆಲವು ಚಿಕಿತ್ಸೆಗಳನ್ನು ರಜನಿಕಾಂತ್​ಗೆ ನೀಡಲಾಗುತ್ತಿದೆ ಎನ್ನಲಾಗಿದೆ. ಸದ್ಯ ರಜನಿಕಾಂತ್ ಫ್ಯಾನ್ಸ್ ಸಾಕಷ್ಟು ಆತಂಕಗೊಂಡಿದ್ದಾರೆ. ಅವರ ಕಡೆಯಿಂದ ಆರೋಗ್ಯದ ಬಗ್ಗೆ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ರಜನಿಕಾಂತ್ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ

Join Whatsapp
Exit mobile version