Home ಟಾಪ್ ಸುದ್ದಿಗಳು ನಟ ರವಿಚಂದ್ರನ್ ತಾಯಿ ‘ಪಟ್ಟಮ್ಮಾಳ್ ವೀರಸ್ವಾಮಿ’ ನಿಧನ

ನಟ ರವಿಚಂದ್ರನ್ ತಾಯಿ ‘ಪಟ್ಟಮ್ಮಾಳ್ ವೀರಸ್ವಾಮಿ’ ನಿಧನ

ಬೆಂಗಳೂರು: ಕನ್ನಡದ ಖ್ಯಾತ ಚಿತ್ರನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ(83) ಸೋಮವಾರ ಬೆಳಗ್ಗೆ 6:30 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ರವಿಚಂದ್ರನ್ ಸೇರಿದಂತೆ ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಪಟ್ಟಮ್ಮಾಳ್ ಅಗಲಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪಟ್ಟಮ್ಮಾಳ್‍ ರನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ  ಇಂದು ಮುಂಜಾನೆ ನಿಧನರಾದರು.ಸಂಜೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Join Whatsapp
Exit mobile version