ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಗೆ ಸಂಕಷ್ಟ: ನಟ ಶಶಿಕುಮಾರ್ ಸೇರಿ ಮೂವರು ಬಿಜೆಪಿ ಸೇರ್ಪಡೆ

Prasthutha|

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಹೊಸ್ತಿಲಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

- Advertisement -


ತುಮಕೂರಿನ ಮಾಜಿ ಸಂಸದರಾದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ನಟ ಶಶಿಕುಮಾರ್ ಬಿಜೆಪಿ ಸೇರಿದ್ದಾರೆ. ಅಲ್ಲದೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಬಿಜೆಪಿ ಸೇರಿದ್ದಾರೆ.

Join Whatsapp