Home ಟಾಪ್ ಸುದ್ದಿಗಳು ನಟ ದರ್ಶನ್ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ: ನಟ ಶಿವರಾಜ್ ಕುಮಾರ್

ನಟ ದರ್ಶನ್ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ: ನಟ ಶಿವರಾಜ್ ಕುಮಾರ್

ಬೆಂಗಳೂರು: ‘ಕ್ರಾಂತಿ’ ಸಿನಿಮಾ ಪ್ರಚಾರದ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆಗೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದು, ಈ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಭಾನುವಾರ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ ಎಂದು ಹೇಳಿದ್ದಾರೆ.

ಭಾನುವಾರ ಹೊಸಪೇಟೆಯಲ್ಲಿ ‘ಕ್ರಾಂತಿ’ ಸಿನಿಮಾದ ಎರಡನೇ ಹಾಡನ್ನು ರಿಲೀಸ್ ಮಾಡಲು ನಟ  ದರ್ಶನ್ ವೇದಿಕೆ ಮೇಲೆ ಬಂದಿದ್ದರು. ಈ ವೇಳೆ ಕಿಡಿಗೇಡಿಯೊಬ್ಬ ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದಾನೆ. ಕಿಡಿಗೇಡಿಗಳ ಈ ಕೃತ್ಯಕ್ಕೆ ಡಿ ಬಾಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Join Whatsapp
Exit mobile version