ಡಿ.ಕೆ.ಶಿವಕುಮಾರ್ ಭೇಟಿಯಾದ ನಟ ಶಿವರಾಜ್ ಕುಮಾರ್ ದಂಪತಿ

Prasthutha|

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಇಂದು ತಮ್ಮ ಪತ್ನಿ ಗೀತಾ ಹಾಗೂ ಬಾಮೈದ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದಲ್ಲಿರುವ ಮನೆಯಲ್ಲಿ ಭೇಟಿಯಾದರು.

- Advertisement -


ಭೇಟಿಯ ಉದ್ದೇಶ ಗೊತ್ತಾಗಿಲ್ಲ. ಆದರೆ, ಗೀತಾರನ್ನು ಮುಂದಿನ ವರ್ಷ ನಡೆಯಲಿರುವ ಲೋಕ ಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಅಭ್ಯರ್ಥಿಯಾಗಿಸುವ ಪ್ರಸ್ತಾಪವಿದೆ ಮತ್ತು ಗೀತಾ ಸಹ ಆ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp