ಬಿಗ್ ಬಾಸ್ ಗೆ ಅಧಿಕೃತ ವಿದಾಯ ಘೋಷಿಸಿದ ನಟ ಸುದೀಪ್: ಭಾವುಕ ಪೋಸ್ಟ್‌

Prasthutha|

ಬೆಂಗಳೂರು: ನಟ ಸುದೀಪ್ ಅವರು ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಗೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ.

- Advertisement -


ಈ ಬಗ್ಗೆ ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಬಿಗ್ ಬಾಸ್ ಬಗ್ಗೆ ಭಾವುಕ ಮಾತುಗಳನ್ನು ಆಡಿದ್ದಾರೆ.


ಸುದೀಪ್ ಹೇಳಿದ್ದೇನು?
ಕಳೆದ 11 ಸೀಸನ್ ಗಳಿಂದ ನಾನು ಬಿಗ್ ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ.

- Advertisement -

ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಈ ಶೋ ನಡೆಯುವ ಮೊದಲು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡುವುದಿಲ್ಲ ಎಂದು ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಶೋ ನಡೆಸಲು ಒಪ್ಪಿಗೆ ನೀಡಿದ್ದರು.

ಮ್ಯಾಕ್ಸ್ ಸಿನಿಮಾದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್, ಎಷ್ಟು ಮಾಡುವುದು? ಎಲ್ಲರನ್ನೂ ರಿಪೇರಿ ಮಾಡುತ್ತಾ ಕುಳಿತುಕೊಳ್ಳಲು ನಾನು ಬಂದಿದ್ದೀನಾ? ಬೇರೆ ಕೆಲಸಗಳು ಇರುತ್ತವೆ. ತುಂಬ ಶ್ರಮ ಬೇಕು. ಅದು ಯಾರಿಗೂ ಅರ್ಥ ಆಗುತ್ತಿಲ್ಲ ಎಂದಿದ್ದರು.



Join Whatsapp