Home ಟಾಪ್ ಸುದ್ದಿಗಳು ನಟ ದರ್ಶನ್ ಮೇಲೆ ಚಪ್ಪಲಿ ಎಸೆತ: ನಟ ಸುದೀಪ್ ಪ್ರತಿಕ್ರಿಯಿಸಿದ್ದು ಹೀಗೆ…..

ನಟ ದರ್ಶನ್ ಮೇಲೆ ಚಪ್ಪಲಿ ಎಸೆತ: ನಟ ಸುದೀಪ್ ಪ್ರತಿಕ್ರಿಯಿಸಿದ್ದು ಹೀಗೆ…..

ಬೆಂಗಳೂರು: ‘ಕ್ರಾಂತಿ’ ಸಿನಿಮಾ ಪ್ರಚಾರದ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆಗೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್, ಪ್ರತಿಕ್ರಿಯಿಸಿದ್ದು, ಆಕ್ರೋಶ ಎಲ್ಲದಕ್ಕೂ ಉತ್ತರವಲ್ಲ ಎಂದು ಹೇಳಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿದ ಅವರು, ನಮ್ಮ ಭೂಮಿ, ಭಾಷೆ, ಸಂಸ್ಕೃತಿ ಎಲ್ಲವೂ ಪ್ರೀತಿ ಮತ್ತು ಗೌರವವನ್ನು ಕಲಿಸುತ್ತವೆ. ಪ್ರತಿ ಸಮಸ್ಯೆಗೆ ಉತ್ತರವಿದೆ. ಸಮಸ್ಯೆಯನ್ನು ಹಲವು ವಿಧದಲ್ಲಿ ಬಗೆಹರಿಸಬಹುದು. ಪ್ರತಿ ವ್ಯಕ್ತಿಯನ್ನು ಗೌರವದಿಂದ ಕಾಣಬೇಕು. ಯಾವುದೇ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ದರ್ಶನ್ ಕ್ರಾಂತಿ ಸಿನಿಮಾ ಪ್ರಚಾರ ಕಾರ್ಯಕ್ರಮದ ವೀಡಿಯೊ ನೋಡಿದೆ. ಅಲ್ಲಿ ನಡೆದ ಘಟನೆ ಮನಸ್ಸಿಗೆ ನೋವುಂಟು ಮಾಡಿದೆ. ಇದು ಸಮರ್ಥಿಸಿಕೊಳ್ಳಲಾಗದ ಅಮಾನವೀಯ ಘಟನೆಯಿದು ಎಂದು ಸುದೀಪ್ ಬೇಸರ ತೋಡಿಕೊಂಡಿದ್ದಾರೆ.


ನಟ ದರ್ಶನ್ ನಮ್ಮ ಭಾಷೆಗೆ, ನಾಡಿಗೆ ಸಾಕಷ್ಟು ಕಾಣಿಕೆ ನೀಡಿದ್ದಾರೆ. ಅವರಿಗೆ ಈ ರೀತಿ ಅವಮಾನಿಸಿರುವುದು ಸರಿಯಲ್ಲ. ಇದು ನಿಜಕ್ಕೂ ನನಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

Join Whatsapp
Exit mobile version