ಬಂಧನದ ಭೀತಿಯಲ್ಲಿದ್ದ ನಟ ಉಪೇಂದ್ರ ನಾಪತ್ತೆ

Prasthutha|

ಬೆಂಗಳೂರು: ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ನಿನ್ನೆಯಷ್ಟೇ ಸ್ಯಾಂಡಲ್ ವುಡ್ ನಟ ಉಪೇಂದ್ರ ಮೇಲೆ ಎಫ್ಐಆರ್ ದಾಖಲಾಗಿದ್ದು, ಬಂಧನದ ಭೀತಿಯಲ್ಲಿದ್ದ ಉಪೇಂದ್ರ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದರು.


ಇದೀಗ ಉಪೇಂದ್ರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ರಣಧೀರ ಪಡೆ ಹರೀಶ್ ಕೊಟ್ಟ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಟ ಉಪೇಂದ್ರಗೆ ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.

Join Whatsapp