ಜಾತಿ ನಿಂದನೆ ಮಾಡಿಲ್ಲ, FIR ರದ್ದು ಮಾಡಿ: ಹೈಕೋರ್ಟ್ ಮೊರೆಹೋದ ನಟ ಉಪೇಂದ್ರ

Prasthutha|

ಬೆಂಗಳೂರು: ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು, ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರಗೆ ನೋಟಿಸ್ ಜಾರಿ ಮಾಡಲಾಗಿದೆ.

- Advertisement -

ಈ ಮಧ್ಯೆ ಎಫ್ ಐಆರ್ ರದ್ದು ಕೋರಿ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ.


‘ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಮಾತ್ರವೇ ಗಾದೆ ಬಳಸಲಾಗಿದೆ. ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೋರಿದ್ದೇನೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ. ಸಮಾಜದಲ್ಲಿನ ತಾರತಮ್ಯದ ವಿರುದ್ಧ ನಾನು ಹೋರಾಡುತ್ತಿದ್ದೇನೆ’ ಎಂದು ಉಪೇಂದ್ರ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

Join Whatsapp