ಮಲ್ಲೇಶ್ವರಂ ನಿವಾಸದಲ್ಲಿ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅಂತಿಮ ದರ್ಶನ

Prasthutha|

ಬೆಂಗಳೂರು: ಕಳೆದರಡು ದಿನದ ಹಿಂದೆ ಥಾಯ್ಲೆಂಡ್‌ ನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಸ್ಯಾಂಡಲ್ ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ಮಂಗಳವಾರ ತಡರಾತ್ರಿ ಬೆಂಗಳೂರಿಗೆ ತರಲಾಗಿದೆ.

- Advertisement -

ಸ್ಪಂದನಾ ತವರು ಮನೆಯಾದ ಬಿ.ಕೆ ಶಿವರಾಮ್ ಅವರ ನಿವಾಸದಲ್ಲಿ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಮಧ್ಯಾಹ್ನ 2ಗಂಟೆವರೆಗೆ ಅವಕಾಶ ನೀಡಲಾಗಿದೆ.

ಸ್ಪಂದನಾ ಅವರ ಅಂತಿಮ ದರ್ಶನ ಪಡೆಯಲು ಕುಟುಂಬದ ಆಪ್ತರು, ಚಿತ್ರರಂಗ, ರಾಜಕೀಯವಲಯದ ಗಣ್ಯರು ಹಾಗೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

Join Whatsapp