Home ಟಾಪ್ ಸುದ್ದಿಗಳು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಟ ವಿಜಯ್ ಸೇತುಪತಿ ಮೇಲೆ ಹಲ್ಲೆ

ದೇವನಹಳ್ಳಿ: ತಮಿಳಿನ ಜನಪ್ರಿಯ ನಟ ವಿಜಯ್ ಸೇತುಪತಿ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಚೆನ್ನೈಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳಿನ ಜನಪ್ರಿಯ ನಟ ವಿಜಯ್ ಸೇತುಪತಿ ಮೇಲೆ ಪ್ರಯಾಣಿಕನೊಬ್ಬ ಏಕಾಏಕಿ ಬಂದು ಹಲ್ಲೆ ನಡೆಸಿದ್ದಾನೆ.

ವೀಡಿಯೋ ವೀಕ್ಷಿಸಿ…

ನಟನ ಮೇಲೆ ಏಕಾಏಕಿ ಬಂದ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ್ದು, ಈ ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿದೆ.

ಇದೇ ವೇಳೆ, ಹಲ್ಲೆ ಮಾಡಿದ ಪ್ರಯಾಣಿಕ ಯಾರು? ವಿಜಯ್ ಸೇತುಪತಿ ಮೇಲೆ ಹಲ್ಲೆ ಮಾಡಲು ಕಾರಣವೇನು? ಎನ್ನುವುದು ತಿಳಿದುಬಂದಿಲ್ಲ.

Join Whatsapp
Exit mobile version