ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗಲ್ಲ ಎಂದ ನಟ ವಿನೋದ್ ಪ್ರಭಾಕರ್

Prasthutha|

ಬೆಂಗಳೂರು: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಸ್ಯಾಂಡಲ್ ವುಡ್ ನಟ-ನಟಿಯರು ಕೂಡ ಸೌಜನ್ಯ ಕುಟುಂಬಕ್ಕೆ ಆದ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ್ದಾರೆ.

- Advertisement -


ಕನ್ನಡ ಖ್ಯಾತ ನಟ ದಿ. ಟೈಗರ್ ಪ್ರಭಾಕಾರ್ ಮಗ ನಟ ವಿನೋದ್ ಟೈಗರ್ ಪ್ರಭಾಕರ್ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ನ್ಯಾಯ ಸಿಗುವವರೆಗೂ ನಾನು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ.


ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ನಟ ವಿನೋದ್, ಮಹೇಶ್ ಶೆಟ್ಟಿ ಸರ್ ನಿಮ್ಮ ಕೆಲಸದ ಮೇಲೆ ನನಗೆ ಅಪಾರ ಗೌರವವಿದೆ, ನಾನು ಧರ್ಮಸ್ಥಳ ಮಂಜುನಾಥ ಮತ್ತು ಅಣ್ಣಪ್ಪನಲ್ಲಿ ಪ್ರಾರ್ಥಿಸುತ್ತೇನೆ. ಸೌಜನ್ಯ ನ್ಯಾಯ ಕೊಡಲಿ. ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ ನಾನು ಧರ್ಮಸ್ಥಳಕ್ಕೆ ಹೋಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಇತ್ತೀಚಿಗಷ್ಟೇ ನಟ ದುನಿಯಾ ವಿಜಯ್ ಕೂಡ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಹಾಕಿಕೊಂಡಿದ್ದರು.

Join Whatsapp