ಬೆಂಗಳೂರು: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ಮೂವರು ಯುವಕರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ.
ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನೆಚ್ಚಿನ ನಟ ಕಟೌಟ್ ನಿಲ್ಲಿಸಲಾಗುತ್ತಿತ್ತು. ಈ ವೇಳೆ ಕಟೌಟ್ ಗೆ ವಿದ್ಯುತ್ ಸ್ಪರ್ಶಿಸಿ ಹನುಮಂತ ಹರಿಜನ (21), ಮುರಳಿ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟಿದ್ದರು.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ. ಅವರನ್ನು ನಂಬಿದ್ದ ಕುಟುಂಬಗಳೀಗ ಸಂಕಷ್ಟಕ್ಕೆ ಸಿಲುಕಿದ್ದು, ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಚಿತ್ರನಟ ಯಶ್ ಜನ್ಮದಿನದ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು.
— CM of Karnataka (@CMofKarnataka) January 8, 2024
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು… pic.twitter.com/6H93yWYngw