ನಟಿ ಆರೋಹಿತ ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ

Prasthutha|

ಬೆಂಗಳೂರು: ಸಿನಿಮಾ ನಟಿ ಆರೋಹಿತರವರು ಆಮ್‌ ಆದ್ಮಿ ಪಾರ್ಟಿಗೆ ಬುಧವಾರ ಸೇರ್ಪಡೆಯಾದರು.

- Advertisement -

ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಆರೋಹಿತರವನ್ನು ಎಎಪಿಗೆ ಸ್ವಾಗತಿಸಿದರು.

ಎಎಪಿ ಸೇರ್ಪಡೆ ಕುರಿತು ಮಾತನಾಡಿದ ನಟಿ ಆರೋಹಿತ, “ಕರ್ನಾಟಕ ಹಾಗೂ ದೇಶದೆಲ್ಲೆಡೆ ಯುವಜನತೆಯು ಬದಲಾವಣೆ ಬಯಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಬದಲಾವಣೆ ಸಾಧ್ಯವಾಗಬೇಕಾದರೆ ಶಾಲೆಗಳಲ್ಲಿ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ದೆಹಲಿಯಲ್ಲಿ ಆಮ್‌ ಆದ್ಮಿ ಪಾರ್ಟಿಯು ಸರ್ಕಾರಿ ಶಾಲೆಗಳಲ್ಲಿ ಅದ್ಭುತ ಬದಲಾವಣೆ ತಂದಿದೆ. ಸ್ವಚ್ಛ ಹಾಗೂ ಗುಣಮಟ್ಟದ ಆಡಳಿತದಿಂದ ಮಾತ್ರ ಇದು ಸಾಧ್ಯ. ಕರ್ನಾಟಕದಲ್ಲೂ ಅಂತಹ ಆಡಳಿತ ಬರಬೇಕು ಎಂಬ ಉದ್ದೇಶದಿಂದ ಎಎಪಿ ಸೇರಿದ್ದೇನೆ” ಎಂದು ಹೇಳಿದರು.

Join Whatsapp