ಲೈವ್‌ನಲ್ಲೇ ಕಣ್ಣಿರಿಟ್ಟು ಆಂಧ್ರಪ್ರದೇಶ ರಾಜಕಾರಣಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ನಟಿ

Prasthutha|

ಹೈದರಾಬಾದ್:‌ ಆಂಧ್ರಪ್ರದೇಶದ ರಾಜಕಾರಣಿಯೊಬ್ಬರ ಮೇಲೆ ಮುಂಬೈ ನಟಿಯೊಬ್ಬರು ಮಾಡಿರುವ ಲೈಂಗಿಕ ಹಾಗೂ ಮಾನಸಿಕ ಹಿಂಸೆಯ ಆರೋಪ ರಾಜಕೀಯ ಹಾಗೂ ಟಾಲಿವುಡ್ ಸಿನಿಮಾರಂಗದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.

- Advertisement -

ಮಾಲಿವುಡ್‌ ಸಿನಿಮಾರಂಗದಲ್ಲಿ ಹೇಮಾ ಸಮಿತಿ ವರದಿ ಬಂದ ಬಳಿಕ ಒಂದೊಂದೇ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬರುತ್ತಿದೆ.

ಗುಜರಾತ್‌ ಮೂಲದ ಕಾದಂಬರಿ ಜೇತ್ವಾನಿ 2015ರಲ್ಲಿ ಬಂದ ‘ಯೂಜಾ’ ಎನ್ನುವ ತೆಲುಗು ಚಿತ್ರಕ್ಕೆ ನಾಯಕಿಯಾಹಿ ಆಯ್ಕೆ ಆಗಿದ್ದರು.

- Advertisement -


ಹೀಗೆ ಬಣ್ಣದ ಲೋಕದಲ್ಲಿ ತನ್ನ ಮೋಹಕ ಅಂದದಿಂದ ಗಮನ ಸೆಳೆದಿದ್ದ ಕಾದಂಬರಿ ಜೇತ್ವಾನಿ ತೆಲುಗಿನ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಇತ್ತೀಚೆಗೆ ಲೈವ್‌ನಲ್ಲಿ ಮಾತನಾಡುತ್ತಾ ಕಣ್ಣೀರಿಟ್ಟು, ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್‌ಸಿಪಿ ಪಕ್ಷದ ನಾಯಕನೊಬ್ಬನ ಮೇಲೆ ಮೇಲೆ ಮಾಡಿರುವ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.



Join Whatsapp
Exit mobile version