ಮುಂಬೈ: ‘ಪನಾಮ ಪೇಪರ್ಸ್ ಲೀಕ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಇಡಿ ತನಿಖೆ ನಡೆಸುತ್ತಿರುವ ‘ಪನಾಮ ಪೇಪರ್ಸ್ ಲೀಕ್’ ಪ್ರಕರಣಕ್ಕೆಈ ಸಮನ್ಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗಲು ಬೇರೆ ದಿನ ನಿಗದಿ ಮಾಡುವಂತೆ ಐಶ್ವರ್ಯಾ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.