Home Uncategorized ನಟಿ ಅಪರ್ಣಾ ನಾಯರ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ನಟಿ ಅಪರ್ಣಾ ನಾಯರ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ತಿರುವನಂತಪುರಂ: ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿದ್ದ ನಟಿ ಅಪರ್ಣಾ ನಾಯರ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ತೀವ್ರ ನೋವು ಉಂಟು ಮಾಡಿದೆ.


ನೇಣು ಬಿಗಿದ ಸ್ಥಿತಿಯಲ್ಲಿ ಅಪರ್ಣಾ ನಾಯರ್ ಅವರ ಶವ ಪತ್ತೆ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಅಪರ್ಣಾ ನಾಯರ್ ಅವರು ತಿರುವನಂತಪುರಂನಲ್ಲಿ ವಾಸವಾಗಿದ್ದರು. ಅವರಿಗೆ 31 ವರ್ಷ ವಯಸ್ಸಾಗಿತ್ತು. ಗುರುವಾರ (ಆಗಸ್ಟ್ 31) ಸಂಜೆ 7.30ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದು ಗೊತ್ತಾಗಿದೆ. ಈ ವೇಳೆ ಮನೆಯಲ್ಲಿ ಅವರ ತಾಯಿ ಮತ್ತು ಸಹೋದರಿ ಇದ್ದರು ಎಂದು ಹೇಳಲಾಗಿದೆ. ಕೂಡಲೇ ಅಪರ್ಣಾ ನಾಯರ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟುಹೊತ್ತಿಗಾಗಲೇ ಅವರು ಕೊನೆಯುಸಿರು ಎಳೆದಿದ್ದರು ಎಂದು ವರದಿ ಆಗಿದೆ.


ಮಲಯಾಳಂ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಅಪರ್ಣಾ ನಾಯರ್ ಅವರು ಸಕ್ರಿಯರಾಗಿದ್ದರು.

Join Whatsapp
Exit mobile version