ಮತ್ತೆ ಕಾಂಗ್ರೆಸ್‌ ಸೇರಿದ ನಟಿ ಭಾವನಾ

Prasthutha|

ಬೆಂಗಳೂರು:  ನಟಿ ಭಾವನಾ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಅವರನ್ನು ಮಂಗಳವಾರ ಭೇಟಿಯಾಗಿ ಮತ್ತೆ ಕಾಂಗ್ರೆಸ್‌ ಸೇರಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್‌ ಮಾಡಿರುವ ಸುರ್ಜೆವಾಲ, ‘ ಕಾಂಗ್ರೆಸ್‌ ನ ಮಾಜಿ ಕಾರ್ಯಕರ್ತೆ, ಕನ್ನಡದ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ. ಅವರಿಗೆ ಶುಭಾಶಯಗಳು,‘ ಎಂದು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಭಾವನಾ ಅವರು ಕಾಂಗ್ರೆಸ್‌ ನಲ್ಲೇ ಇದ್ದು  2018ರ ಮೇ 10ರಂದು ಬಿಜೆಪಿ ಸೇರಿದ್ದರು. 

Join Whatsapp