ನಿಯಮ ಉಲ್ಲಂಘನೆ | ಕಂಗನಾ ರನೌತ್ ಟ್ವಿಟ್ಟರ್ ಖಾತೆ ಅಮಾನತು

Prasthutha|

ಹೊಸದಿಲ್ಲಿ : ಸರಣಿ ಟ್ವೀಟ್‌ಗಳ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಆಕ್ಷೇಪಾರ್ಹ ಪ್ರತಿಕ್ರಿಯೆಗಳನ್ನು ನೀಡಿದ್ದ ಕಂಗನಾ ರನೌತ್ ಅವರ ಟ್ವಿಟ್ಟರ್ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಕಂಗನಾ ಮಮತಾ ವಿರುದ್ಧ ಆಕ್ಷೇಪಾರ್ಹ ಸರಣಿ ಟ್ವೀಟ್ ಮಾಡುವ ಮೂಲಕ ಮೈಕ್ರೋ ಬ್ಲಾಗಿಂಗ್ ಸೈಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದರು.

- Advertisement -

ಭಾನುವಾರ (ಮೇ 2) ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಣೆಯ ನಂತರ ರಾಜ್ಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟಿ ಕಂಗನಾ ಮಮತಾ ಬ್ಯಾನರ್ಜಿಯನ್ನು ಟೀಕಿಸಿದ್ದರು.

ಈ ಕಾರಣಕ್ಕಾಗಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಂಗನಾ ರನೌತ್ ಅವರ ಟ್ವಿಟ್ಟರ್ ಖಾತೆ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇತ್ತೀಚೆಗೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ನಂತರ ನಟಿ ಕಂಗನಾ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಅಳ್ವಿಕೆಗೆ ಒತ್ತಾಯಿಸಿದ್ದರು.

Join Whatsapp