ನಟಿ ಪವಿತ್ರಾ ಜಯರಾಂ ಕಾರು ಅಪಘಾತದಲ್ಲಿ ಸ್ಥಳದಲ್ಲೇ ಮೃತ್ಯು

Prasthutha|

ಆಂಧ್ರಪ್ರದೇಶ: ಕನ್ನಡದ ‘ರೋಬೋ ಫ್ಯಾಮಿಲಿ’ ಹಾಸ್ಯ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿ ಕೊಟ್ಟಿದ್ದ ನಟಿ ಪವಿತ್ರಾ ಜಯರಾಂ (35) ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ.

- Advertisement -

ಪವಿತ್ರಾ ಜಯರಾಂ ಹಲವು ಕನ್ನಡ ಧಾರಾವಾಹಿಗಳಲ್ಲಿ ನಟಿಸಿದ್ದರು. ಅಲ್ಲದೆ ತೆಲುಗು ಪ್ರೇಕ್ಷಕರಿಗೂ ಸಹ ಹತ್ತಿರವಾಗಿದ್ದರು.

ಇಂದು ಬೆಳಗ್ಗೆ ಆಂಧ್ರಪ್ರದೇಶದ ಕರ್ನೂಲ್ ಬಳಿ ನಟಿ ಪವಿತ್ರಾ ಅವರ ಕಾರು ಅಪಘಾತಕ್ಕೀಡಾಗಿದೆ. ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಜೊತೆ ಅವರ ಕುಟುಂಬಸ್ಥರು ಕೂಡ ಕಾರಿನಲ್ಲಿದ್ದರು ಎಂದು ವರದಿಯಾಗಿದೆ.

- Advertisement -

Join Whatsapp