Home ಟಾಪ್ ಸುದ್ದಿಗಳು ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ ದುಷ್ಕರ್ಮಿಗಳು

ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ ದುಷ್ಕರ್ಮಿಗಳು

ಬೆಂಗಳೂರು: ‘ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎಂದು ದುಷ್ಕರ್ಮಿಗಳು ಸುಳ್ಳು ಸುದ್ದಿ ಹರಡಿದ್ದಾರೆ.


ರಮ್ಯಾ ಮೃತಪಟ್ಟಿರುವ ಬಗ್ಗೆ ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು.


ಆದರೆ, ಇದು ಸುಳ್ಳು ಸುದ್ದಿ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿದೆ. ‘ರಮ್ಯಾ ಆರೋಗ್ಯವಾಗಿದ್ದಾರೆ’ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಮ್ಯಾ ಹೆಸರಿನ ತಮಿಳು ಕಿರುತೆರೆ ನಟಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ವಿಚಾರ ಹೇಳುವಾಗ ತಮಿಳುನಾಡಿನ ಕೆಲವರು ರಮ್ಯಾ ದಿವ್ಯಾ ಸ್ಪಂದನಾ ಫೋಟೋ ಹಂಚಿಕೊಂಡಿದ್ದಾರೆ. ಆ ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈಗ ರಮ್ಯಾ ಅವರು ಆರಾಮಾಗಿದ್ದಾರೆ ಎನ್ನುವ ಸುದ್ದಿ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಸದ್ಯ ರಮ್ಯಾ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಸುತ್ತಾಡುತ್ತಾ, ಹಲವರನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಹಲವು ಪೋಸ್ಟ್ಗಳನ್ನು ಹಾಕುತ್ತಿದ್ದಾರೆ.

Join Whatsapp
Exit mobile version