Home ಟಾಪ್ ಸುದ್ದಿಗಳು ನಟಿ ಸುಶ್ಮಿತಾ ಸೇನ್’ಗೆ ಹೃದಯಾಘಾತ

ನಟಿ ಸುಶ್ಮಿತಾ ಸೇನ್’ಗೆ ಹೃದಯಾಘಾತ

ಮುಂಬೈ: ಬಾಲಿವುಡ್ ನಟಿ ಹಾಗೂ ಮಾಜಿ ವಿಶ್ವಸುಂದರಿ ಸುಶ್ಮಿತಾ ಸೇನ್ ಗೆ ಹೃದಯಾಘಾತವಾಗಿರುವ ಬಗ್ಗೆ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.


ತಮಗೆ ಎರಡು ದಿನಗಳ ಹಿಂದೆ ಹೃದಯಾಘಾತವಾಗಿದ್ದು ವೈದ್ಯರು ಆಂಜಿಯೋಪ್ಲಾಸ್ಟ್ ಮಾಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.


ಸುಶ್ಮಿತಾ ಅವರೇ ಹೇಳಿಕೊಂಡಂತೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯದ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಅಭಿಮಾನಿಗಳಿಗೂ ಅವರು ಹೇಳಿದ್ದಾರೆ. ವೈದ್ಯರು ಸೂಕ್ತ ರೀತಿಯಲ್ಲಿ ಸ್ಪಂದಿಸಿ ಚಿಕಿತ್ಸೆ ನೀಡಿದ್ದರಿಂದ ಗುಣಮುಖರಾಗುತ್ತಿರುವ ವಿಚಾರವನ್ನೂ ಅವರು ತಿಳಿಸಿದ್ದಾರೆ.

Join Whatsapp
Exit mobile version