Home ಟಾಪ್ ಸುದ್ದಿಗಳು ಅದಾನಿಗೆ ಕೇಂದ್ರ ಸರ್ಕಾರದಿಂದ ರಕ್ಷಣೆ, ಕೂಡಲೇ ಬಂಧಿಸಿ: ಪುನರುಚ್ಚರಿಸಿದ ರಾಹುಲ್ ಗಾಂಧಿ

ಅದಾನಿಗೆ ಕೇಂದ್ರ ಸರ್ಕಾರದಿಂದ ರಕ್ಷಣೆ, ಕೂಡಲೇ ಬಂಧಿಸಿ: ಪುನರುಚ್ಚರಿಸಿದ ರಾಹುಲ್ ಗಾಂಧಿ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಹಾಗೂ ವಂಚನೆ ಆರೋಪದ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಅವರನ್ನು ಕೂಡಲೇ ಬಂಧಿಸಬೇಕು ಎಂದು ಪುನರುಚ್ಚರಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರವು ಅದಾನಿಗೆ ರಕ್ಷಣೆಯನ್ನು ಒದಗಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.


ಸಂಸತ್ತಿನ ಆವರಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್, ‘ದೇಶದಲ್ಲಿ ಸಣ್ಣ ಸಣ್ಣ ಆರೋಪಗಳ ಮೇಲೆ ನೂರಾರು ಜನರನ್ನು ಬಂಧಿಸಿದಾಗ ಅದಾನಿಯನ್ನು ಮಾತ್ರ ಜೈಲಿಗೆ ಏಕೆ ಕಳುಹಿಸುತ್ತಿಲ್ಲ’ ಎಂದು ಪ್ರಶ್ನಿಸಿದ್ದಾರೆ.


ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ, ಅವರ ಅಣ್ಣನ ಮಗ ಸಾಗರ್ ಅದಾನಿ ವಿರುದ್ಧ ಅಮೆರಿಕದ ಅಧಿಕಾರಿಗಳು ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪಣೆಯಲ್ಲಿ ವಿದೇಶಿ ಭ್ರಷ್ಟಾಚಾರ ಪದ್ಧತಿ ಕಾಯ್ದೆಯ (ಎಫ್ಸಿಪಿಎ) ಉಲ್ಲಂಘನೆಯ ಆರೋಪ ಹೊರಿಸಿಲ್ಲ ಎಂದು ಅದಾನಿ ಸಮೂಹ ಹೇಳಿಕೆಯ ಬೆನ್ನಲ್ಲೇ ಅದಾನಿ ಬಂಧನಕ್ಕೆ ರಾಹುಲ್ ಒತ್ತಾಯಿಸಿದ್ದಾರೆ.

Join Whatsapp
Exit mobile version