ದೆಹಲಿ: ಅದಾನಿ ಗ್ರೂಪ್ ವಿರುದ್ಧದ ಹಿಂಡೆನ್ ಬರ್ಗ್ ವರದಿಯ ಬಗ್ಗೆ ತನಿಖೆಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ.
ಸುಪ್ರೀಂಕೋರ್ಟ್’ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಹಿಂಡೆನ್ ಬರ್ಗ್ ವರದಿಯ ತನಿಖೆ ನಡೆಸಲು ನಿರ್ದೇಶಿಸುವಂತೆ ಕೋರಿ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಲಾಗಿತ್ತು.
ವಕೀಲ ವಿಶಾಲ್ ತಿವಾರಿ ಅವರು ಸಾರ್ವಜನಿಕ ಹಿತಾಸಕ್ತಿ (PIL) ಅರ್ಜಿ ಸಲ್ಲಿಸಿದ್ದು, ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠ ಈ ಆದೇಶವನ್ನು ಗುರುವಾರ ಹೊರಡಿಸಿದೆ. ವಿಚಾರಣೆಯು ಶುಕ್ರವಾರ ನಡೆಯಲಿದೆ.