ಮತ್ತೆ ಏಷ್ಯಾದ ‘ನಂಬರ್ 1 ಶ್ರೀಮಂತ ಭಾರತೀಯ’ ಪಟ್ಟ ಗಿಟ್ಟಿಸಿಕೊಂಡ ಅದಾನಿ

Prasthutha|

ನವದೆಹಲಿ: ಗೌತಮ್ ಅದಾನಿ ಮತ್ತೆ ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿರುವ ನಂಬರ್ 1 ಭಾರತೀಯ ಅನ್ನೋ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿರುವ ಅದಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂದು ಗುರುತಿಸಿಕೊಂಡಿದ್ದಾರೆ.

- Advertisement -

ಬ್ಲೂಮ್‌ಬರ್ಗ್ ಬಿಡುಗಡೆ ಮಾಡಿರುವ ಏಷ್ಯಾದ ಶ್ರೀಮಂತರ ವರದಿಯಲ್ಲಿ ಗೌತಮ್ ಅದಾನಿ ಮೊದಲ ಸ್ಥಾನಕ್ಕೇರಿದ್ದರೆ, ಮುಕೇಶ್ ಅಂಬಾನಿ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಅದಾನಿ ನೆಟ್‌ ವರ್ತ್ ಒಟ್ಟು 111 ಬಿಲಿಯನ್ ಅಮೆರಿಕನ್ ಡಾಲರ್ ಮೊತ್ತವಾಗಿದ್ದರೆ, ಅಂಬಾನಿ ಒಟ್ಟು ಆಸ್ತಿ 109 ಬಿಲಿಯನ್ ಅಮೆರಿಕನ್ ಡಾಲರ್ ಎಂದು ಬ್ಲೂಮ್‌ಬರ್ಗ್ ಇಂಡೆಕ್ಸ್ ವರದಿ ಹೇಳಿದೆ.

2023ರಲ್ಲಿ ಅದಾನಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಹಿಂಡನ್‌ಬರ್ಗ್ ವರದಿಯಿಂದ ಅದಾನಿ ಉದ್ಯಮ ಸಾಮ್ರಾಜ್ಯಕ್ಕೆ ಭಾರಿ ಹಿನ್ನಡೆಯಾಗಿತ್ತು. 2023ರಲ್ಲಿ ಸುಪ್ರೀಂ ಕೋರ್ಟ್ ಹಿಂಡನ್‌ಬರ್ಗ್ ವರದಿ ಕುರಿತು ತನಿಖೆಗೆ ಆದೇಶಿಸಿತ್ತು. ಹಿಂಡನ್‌ಬರ್ಗ್ ವರದಿಗೂ ಮುನ್ನ ಅದಾನಿ ವಿಶ್ವದ 3ನೇ ಅತೀ ದೊಡ್ಡ ಶ್ರೀಮಂತ ವ್ಯಕ್ತಿ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈ ವರದಿ ಬಳಿಕ ಅದಾನಿ ಷೇರುಗಳು ಪಾತಾಳಕ್ಕೆ ಕುಸಿದಿತ್ತು. ಲಕ್ಷ ಕೋಟಿ ರೂಪಾಯಿಗಳ ನಷ್ಟ ಸಂಭವಿಸಿತ್ತು. ಹೀಗಾಗಿ ಶ್ರೀಮಂತರ ಪಟ್ಟಿಯಿಂದ ಅದಾನಿ ಹೊರಬಿದ್ದಿದ್ದರು.

- Advertisement -

ಅದಾನಿ ಷೇರುಪೇಟೆ ಹಾಗೂ ಉದ್ಯಮದಲ್ಲಿ ಮೋಸದ ಮಾರ್ಗದಲ್ಲಿ ಆದಾಯಗಳಿಸುತ್ತಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆ ಆರೋಪಿಸಿತ್ತು. ಈ ಬಗ್ಗೆ ಷೇರುಪೇಟೆ ನಿಯಂತ್ರಣ ಪ್ರಾಧಿಕಾರವಾದ ‘ಸೆಬಿ’ ತನಿಖೆ ನಡೆಸಿತ್ತು.



Join Whatsapp