ಉದ್ಯಮಿ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶ !

Prasthutha|

ಹೈದರಾಬಾದ್: ಉದ್ಯಮಿ ಗೌತಮ್ ಅದಾನಿ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲು ತಯಾರಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -


ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಇದಕ್ಕೆ ಜಗನ್ ರೆಡ್ಡಿ ಸಹ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.


ಈ ಮೂಲಕ ಗೌತಮ್ ಅದಾನಿ ಸಕ್ರಿಯ ರಾಜಕೀಯಕ್ಕೆಪ್ರವೇಶಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Join Whatsapp