ವಿಜಯಪುರ: ತಿರುಪತಿ ಲಡ್ಡು ವಿಚಾರ ಜನರ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದು, ದನದ ಕೊಬ್ಬು ಬೆರಸುವುದು ಘೋರ ಅಪರಾಧ. ದನದ ಕೊಬ್ಬನ್ನು ಬೆರಸಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು ಎಂದು ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದ್ದಾರೆ.
ವಿಜಯಪುರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು ಮಿಶ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಇದು ಜನರ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದು, ದನದ ಕೊಬ್ಬನ್ನು ಬೆರೆಸಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು. ಭಕ್ತರ ಭಾವನೆಗಳ ಜೊತೆ ಆಟ ಆವಡುವುದು ಸರಿಯಲ್ಲ. ಅದರಲ್ಲಿ ಪಾವಿತ್ರ‍್ಯತೆ ಇದೆ, ದನದ ಕೊಬ್ಬು ಬೆರೆಸುವುದು ಘೋರ ಅಪರಾಧ. ಆಗಾಗ ಪ್ರಸಾದದ ತಪಾಸಣೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.