Home ಟಾಪ್ ಸುದ್ದಿಗಳು ರಾಮನಗರ ಜಿಲ್ಲೆ ಬೆಂಗಳೂರು ಸೇರ್ಪಡೆ: ಸಿದ್ದರಾಮಯ್ಯ ಸ್ಪಷ್ಟನೆ

ರಾಮನಗರ ಜಿಲ್ಲೆ ಬೆಂಗಳೂರು ಸೇರ್ಪಡೆ: ಸಿದ್ದರಾಮಯ್ಯ ಸ್ಪಷ್ಟನೆ

ಉಡುಪಿ: ರಾಮನಗರ ಬೆಂಗಳೂರು ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ, ನನ್ನ ಬಳಿ ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರವಾಗಿ ಯಾರೂ ಚರ್ಚೆ ಮಾಡಿಲ್ಲ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಇಂದು ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದರು.

ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಂದಿನ ಬಜೆಟ್ ನಲ್ಲಿ ಬಂಟ ಅಭಿವೃದ್ಧಿ ನಿಗಮ ಘೋಷಿಸುತ್ತೇನೆ. ಬ್ರಹ್ಮಾವರ ಸಕ್ಕರೆ ಕಾರ್ಖಾನೆ 13 ಕೋಟಿ ಹಗರಣ ಆದ ಬಗ್ಗೆ ಆರೋಪ ಕೇಳಿ ಬಂದಿದೆ. ಹಗರಣ ಆಗಿದ್ದರೆ ನಾವು ತನಿಖೆ ಮಾಡುತ್ತೇವೆ. ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದೂ ಸಿಎಂ ಹೇಳಿದ್ದಾರೆ.

ಇದೇ ವೇಳೆ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವ್ಯವಹಾರ ಕುರಿತು ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ನಮ್ಮ ಸರ್ಕಾರವನ್ನು ಉನ್ನತ ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ಮಾಡ್ತಿರೋದು ನಿಜ. ಆದರೆ ಆ ಪ್ರಯತ್ನದಲ್ಲಿ ಸಕ್ಸಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಸಂದರ್ಭ ಹೇಳಿದರು. ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ ಆಫರ್ ನೀಡಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ.

Join Whatsapp
Exit mobile version