Home ಟಾಪ್ ಸುದ್ದಿಗಳು ಜಮ್ಮು-ಕಾಶ್ಮೀರ ಗಡಿ ಭಾಗದಲ್ಲಿ ಪಾಕ್‌ ದಾಳಿ: ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು

ಜಮ್ಮು-ಕಾಶ್ಮೀರ ಗಡಿ ಭಾಗದಲ್ಲಿ ಪಾಕ್‌ ದಾಳಿ: ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು

0

ಶ್ರೀನಗರ: ಜಮ್ಮು–ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಶನಿವಾರ ತೀವ್ರ ಗುಂಡಿನ ದಾಳಿ ನಡೆಸಿದ ಪರಿಣಾಮ ಹೆಚ್ಚುವರಿ ಜಿಲ್ಲಾಧಿಕಾರಿ ಮೃತಪಟ್ಟಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ ನಗರದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಪಾಕ್‌ನ ಶೆಲ್ ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಮತ್ತಿಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನೂ ರಾಜ್ ಕುಮಾರ್ ತಾಪ್ಪಾ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಸಂತಾಪ ವ್ಯಕ್ತಪಡಿಸಿದ್ದಾರೆ.

ಇಂದು ರಜೌರಿ ಪಟ್ಟಣವನ್ನು ಗುರಿಯಾಗಿಸಿ ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್‌ ಅಬ್ದುಲ್ಲಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ. ನಾವು ಸರ್ಕಾರದ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ರಾಜ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಜತೆಗೆ, ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲೂ ಭಾಗವಹಿಸಿದ್ದರು ಎಂದು ಒಮರ್‌ ಸ್ಮರಿಸಿದ್ದಾರೆ.

ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ರಾಜ್ ಕುಮಾರ್ ಥಪ್ಪಾ ಸಾವನ್ನಪ್ಪಿದ್ದಾರೆ. ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡ ನಂತರ ಈ ದಾಳಿ ನಡೆದಿದೆ. ಪಾಕಿಸ್ತಾನದ ಆಕ್ರಮಣವು ಈ ಪ್ರದೇಶದಲ್ಲಿ ಭಾರೀ ಶೆಲ್ ದಾಳಿ ಮತ್ತು ಡ್ರೋನ್ ದಾಳಿಗೆ ಕಾರಣವಾಗಿದೆ

NO COMMENTS

LEAVE A REPLY

Please enter your comment!
Please enter your name here

Exit mobile version