ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣ: ಎಡಿಜಿಪಿ ಅಲೋಕ್ ಕುಮಾರ್ ವಿಚಾರಣೆ

Prasthutha|

ಬೆಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರನ್ನು ವಿಶೇಷ ನ್ಯಾಯಾಲಯ ನೇರ ವಿಚಾರಣೆ ಆರಂಭಿಸಲು ನಿರ್ಧರಿಸಿದೆ.

- Advertisement -


2015ರಲ್ಲಿ ವ್ಯಕ್ತಿಯೊಬ್ಬರಿಂದ ₹ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಅಲೋಕ್ ಕುಮಾರ್, ಶೇಷಾದ್ರಿಪುರ ಉಪ ವಿಭಾಗದ ಆಗಿನ ಎಸಿಪಿ ದಾನೇಶ್ವರ್ ರಾವ್ ಮತ್ತು ವೈಯಾಲಿಕಾವಲ್ ಪೊಲೀಸ್ ಠಾಣೆಯ ಆಗಿನ ಇನ್ಸ್ಪೆಕ್ಟರ್ ಶಂಕರಾಚಾರಿ ವಿರುದ್ಧ ಸಲ್ಲಿಕೆಯಾಗಿದ್ದ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ‘ಬಿ’ ವರದಿ ಸಲ್ಲಿಸಿದ್ದರು. ಈ ವರದಿಯನ್ನು ತಿರಸ್ಕರಿಸಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಲು ತೀರ್ಮಾನಿಸಿದೆ.


ಅಪರಾಧ ದಂಡ ಪ್ರಕ್ರಿಯಾ ಸಂಹಿತೆ(ಸಿಆರ್’ಪಿಸಿ) ಸೆಕ್ಷನ್ 200ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಸಂಜ್ಞೇಯ ಅಪರಾಧ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಲು ನ್ಯಾಯಾಲಯ ತೀರ್ಮಾನಿಸಿದೆ.

Join Whatsapp