Home ಟಾಪ್ ಸುದ್ದಿಗಳು PSI ಅಕ್ರಮ ನೇಮಕಾತಿಗೆ ಮೊದಲ ತಲೆದಂಡ: ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ

PSI ಅಕ್ರಮ ನೇಮಕಾತಿಗೆ ಮೊದಲ ತಲೆದಂಡ: ಎಡಿಜಿಪಿ ಅಮೃತ್ ಪೌಲ್ ಎತ್ತಂಗಡಿ

ಬೆಂಗಳೂರು: ಸಬ್ ಇನ್ಸ್‌ ಪೆಕ್ಟರ್ ( ಪಿಎಸ್ಐ) ನೇಮಕಾತಿಯಲ್ಲಿ‌ ನಡೆದ ಅಕ್ರಮಗಳ ಬೆನ್ನಲ್ಲೇ ಪೊಲೀಸ್ ನೇಮಕಾತಿ‌ ಮಂಡಳಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪಾಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಅಪರಾಧ ಮತ್ತು ತಾಂತ್ರಿಕ ಸೇವೆಗಳು ಘಟಕದ ಎಡಿಜಿಪಿ ಆರ್. ಹಿತೇಂದ್ರ ಅವರಿಗೆ ಪೊಲೀಸ್ ನೇಮಕಾತಿ ಮಂಡಳಿಯ ಎಡಿಜಿಪಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಅಮೃತ್ ಪಾಲ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ನಿಯೋಜಿಸಲಾಗಿದೆ. 545 ಪಿಎಸ್ಐ ಹುದ್ದೆಗಳ‌ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಖಚಿತವಾಗುತ್ತಿದ್ದಂತೆ ಅಮೃತ್ ಪಾಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು.

‘ಅಕ್ರಮದ ಬಗ್ಗೆ ಕೆಲವು ಅಭ್ಯರ್ಥಿಗಳು ನೇರವಾಗಿ ದೂರು ನೀಡಿದ್ದರೂ ಪಾಲ್ ಅವರು ನಿರ್ಲಕ್ಷ್ಯ ವಹಿಸಿದ್ದರು. ಅಲ್ಲದೆ, ಇಡೀ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳೂ ಕೂಡಾ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗಿಯಾದ ಕೆಲವು ಅಧಿಕಾರಿಗಳ ವರ್ಗಾವಣೆ ಸಾಧ್ಯತೆಯಿದೆ ಎಂದು ಗೃಹ ಇಲಾಖೆಯ ಮೂಲಗಳು ಹೇಳಿವೆ.

Join Whatsapp
Exit mobile version