ಮಂಗಳೂರು: ಫಾಝಿಲ್ ಹತ್ಯೆಯ ಬಳಿಕ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸ್ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಸಾರ್ವಜನಿಕರನ್ನು ಭೇಟಿಯಾದರು.
ಎಡಿಜಿಪಿ ಅಲೋಕ್ ಕುಮಾರ್ ಅವರು ಸುರತ್ಕಲ್ ಮತ್ತು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಕೂಡ ಜೊತೆಯಲ್ಲಿದ್ದರು.
ಮಂಗಳೂರಿನಲ್ಲಿ ಆ. 5ರವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ.