ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಆದಿಕೇಶವಲು ಮೊಮ್ಮಗ ಬಂಧನ !

Prasthutha|

ಬೆಂಗಳೂರು : ರಸ್ತೆ ಬದಿ ಮಲಗಿದ್ದ ಬೀದಿ ನಾಯಿ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹತ್ತಿಸಿ ಸಾಯಿಸಲು ಯತ್ನಿಸಿದ ಆರೋಪದಡಿ ಉದ್ಯಮಿ ಆದಿಕೇಶವಲು ಅವರ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಜ.26ರಂದು ಸಂಜೆ 6.15ರ ಸುಮಾರಿಗೆ ಘಟನೆ ನಡೆದಿದೆ. ಉದ್ದೇಶಪೂರ್ವಕವಾಗಿಯೇ ನಾಯಿ ಮೇಲೆ ಕಾರು ಹತ್ತಿಸುತ್ತಿರುವಂತೆ ಮೇಲ್ನೋಟಕ್ಕೆ ವೀಡಿಯೋದಲ್ಲಿ ಕಂಡು ಬರುತ್ತಿದೆ. ಜಯನಗರ 1ನೇ ಬ್ಲಾಕ್‌ 10ನೇ ‘ಬಿ’ ಮುಖ್ಯರಸ್ತೆಯ ಮನೆ ಎದುರಿನ ಪಾದಚಾರಿ ಮಾರ್ಗದ ಪಕ್ಕದಲ್ಲಿ ಬೀದಿ ನಾಯಿ ಮಲಗಿತ್ತು. ಹೀಗಾಗಿ ಸಾಯಿಸುವ ಉದ್ದೇಶದಿಂದಲೇ ನಾಯಿಯ ಮೇಲೆ ಆದಿ ಕಾರು ಹತ್ತಿಸಿದ್ದಾನೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭದ್ರಿಪ್ರಸಾದ್‌ ಅವರು ದೂರಿನಲ್ಲಿ ಮನವಿ ಮಾಡಿದ್ದರು. ಹೀಗಾಗಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Join Whatsapp