ಬಲ್ಲಿಯಾ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಒಂದೊಂದಾಗಿ ರದ್ದುಪಡಿಸುತ್ತಿದ್ದಾರೆಂದು ಬಿಎಸ್’ಪಿ ಸಂಸದ ಆರೋಪಿಸಿದ್ದಾರೆ.
ಬಲ್ಲಿಯಾ ಜಿಲ್ಲೆಯ ಬೆಳ್ತಾರಾ ರಸ್ತೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಬಿಜೆಪಿ ದ್ವೇಷದ ರಾಜಕೀಯದಲ್ಲಿ ತೊಡಗಿಕೊಂಡಿದೆ. ಇದರಿಂದ ಹಲವು ವರ್ಷಗಳಿಂದ ದೇಶದ ಸಾಮಾಜಿಕ ಸಾಮರಸ್ಯವನ್ನು ನಾಶಪಡಿಸುತ್ತಿದೆ. ಉತ್ತರಪ್ರದೇಶ ರಾಜ್ಯವನ್ನು ಈಗಾಗಲೇ ನಾಲ್ಕು ಭಾಗಗಳನ್ನಾಗಿ ಮಾಡಿದೆ ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದಾಗಿನಿಂದ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಒಂದೊಂದಾಗಿ ರದ್ದುಪಡಿಸುತ್ತಿದ್ದಾರೆ. ಈ ಮೂಲಕ ಮಿಸ್ಟರ್ ಕ್ಲೀನ್ ಎಂಬ ಬಿರುದು ಪಡೆದುಕೊಳ್ಳಲು ಸಜ್ಜಾಗುತ್ತಿದ್ದಾರೆಂದು ತಿಳಿಸಿದ್ದಾರೆ.
ತಮ್ಮ ವಿರುದ್ಧ ಹಾಗೂ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಗಳನ್ನು ಒಂದೊಂದಾಗಿ ರದ್ದುಪಡಿಸುತ್ತಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.