ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಜಾಹೀರಾತು| ಡಿಕೆಶಿಗೆ ಚುನಾವಣಾ ಆಯೋಗ ನೋಟಿಸ್

Prasthutha|

ಬೆಂಗಳೂರು: ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ.

- Advertisement -

ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ನೈಜ ಸಾಕ್ಷ್ಯಗಳನ್ನು ಮೇ 7ರ ಸಂಜೆ 7 ಗಂಟೆಯೊಳಗೆ ಒದಗಿಸುವಂತೆ ಡಿಕೆಶಿಗೆ ಆಯೋಗದಿಂದ ನೋಟಿಸ್ ಜಾರಿಯಾಗಿದೆ.

ಸರ್ಕಾರದ ನೀತಿಯ ಬಗ್ಗೆ ಟೀಕಿಸುವ ಹಕ್ಕಿದೆ. ಆದರೆ ಜಾಹೀರಾತಿನಲ್ಲಿರುವುದು ಸಾಧಾರಣ ಆರೋಪಗಳಲ್ಲ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿರ್ದಿಷ್ಟವಾಗಿ ಆರೋಪಿಸಲಾಗಿದೆ. ಇದು ಚುನಾವಣೆ ಮೇಲೂ ಪರಿಣಾಮ ಬೀರುವಂತಹದ್ದಾಗಿದೆ. ಜಾಹೀರಾತು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಬಳಿ ಪುರಾವೆಗಳಿರಬೇಕು. ಹೀಗಾಗಿ ನಾಳೆ ಸಂಜೆ 7 ಗಂಟೆಯೊಳಗೆ ಪುರಾವೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಚುನಾವಣಾ ಆಯೋಗವು ತಾಕೀತು ಮಾಡಿದೆ.

- Advertisement -

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದ ಆರೋಪ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿ ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟೀಸ್ ಜಾರಿ ಮಾಡಿದೆ. ಸೋಮವಾರದೊಳಗೆ ತಮ್ಮ ಜಾಹೀರಾತನ್ನು ಹಿಂಪಡೆದು ಕ್ಷಮೆ ಕೋರಬೇಕು, ಇಲ್ಲವಾದರೆ ಮಾನಹಾನಿ ಪ್ರಕರಣ ಹೂಡುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ ವತಿಯಿಂದ ನೋಟೀಸ್ ಜಾರಿಯಾಗಿದೆ.

Join Whatsapp