ವಕೀಲ ಜಗದೀಶ್’ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Prasthutha|

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಅವರಣದಲ್ಲಿ ವಕೀಲರ ಗಲಾಟೆ ಪ್ರಕರಣ ಸಂಬಂಧ ಬಂಧಿತರಾಗಿರುವ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕೋರ್ಟ್ ಆವರಣದಲ್ಲಿ ದುರ್ವರ್ತನೆ ತೋರಿರುವುದಾಗಿ‌ ಆರೋಪಿಸಿದ ದೂರಿನ ಅನ್ವಯ, ಜಗದೀಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದರು.
ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ನೇತೃತ್ವದ ನಿಯೋಗವು ಪೊಲೀಸ್ ಕಮೀಷನರ್ ಕಮಲ್ ಪಂತ್​​ಗೆ ಶನಿವಾರ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.
ಪುತ್ರನ ವಿರುದ್ಧ ಕೇಸ್ :
ಈ ನಡುವೆ ಹಲ್ಲೆ ಹಾಗೂ ಬೆದರಿಕೆ ಹಾಕಿದ ಆರೋಪದ ಮೇಲೆ ವಕೀಲ ಜಗದೀಶ್ ಪುತ್ರನ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
ಪುನೀತ್ ಕೆರೆಹಳ್ಳಿ ಎಂಬುವರು ನೀಡಿದ ದೂರಿನ ಮೇರೆಗೆ ವಕೀಲ ಜಗದೀಶ್ ಅವರ ಪುತ್ರ ಆರ್ಯಗೌಡ ಮೇಲೆ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ​ ದಾಖಲಾಗಿದೆ.
ಕಾಲೇಜಿನ ಬಳಿ ಹೋದಾಗ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಕೋರ್ಟ್ ಆದೇಶದ ಮೇರೆಗೆ ಆರ್ಯಗೌಡ ಮೇಲೆ ಐಪಿಸಿ ಸೆಕ್ಷನ್ 323, 504 ಹಾಗೂ 506 ಅಡಿಯಲ್ಲಿ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

Join Whatsapp