ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಅಧಿಕೃತ ಚಾಲನೆ: ಆಕಾಶದಲ್ಲಿ ಲೋಹದ ಹಕ್ಕಿಗಳ ಕಲರವ

Prasthutha|

ಬೆಂಗಳೂರು: ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಸೋಮವಾರ ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು.

- Advertisement -


5 ದಿನಗಳ ಕಾಲ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನದಲ್ಲಿ ಸಾರಂಗ್, ಸೂರ್ಯಕಿರಣ್ ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೇಲ್, ತೇಜಸ್ ಸೇರಿದಂತೆ ಒಟ್ಟು 67 ವಿಮಾನಗಳು ಪ್ರದರ್ಶನ ನೀಡುತ್ತಿವೆ. ಉಳಿದಂತೆ ಸ್ವ್ಯಾಟಿಕ್ ಡಿಸ್ ಪ್ಲೇಯಲ್ಲಿ 36 ವಿಮಾನಗಳು ಪ್ರದರ್ಶನಗೊಳ್ಳಲಿವೆ.


ಈ ಬಾರಿ 98 ರಾಷ್ಟ್ರಗಳು ಭಾಗವಹಿಸಿವೆ. ಒಟ್ಟು 251 ಒಡಂಬಡಿಕೆ ಸಿದ್ಧಗೊಂಡಿದ್ದು, ಕಳೆದ ವರ್ಷ 23 ಸಾವಿರ ಚದರ ಮೀಟರ್ ವ್ಯಾಪ್ತಿಗೆ ಸೀಮಿತವಾಗಿದ್ದ ಪ್ರದರ್ಶನ ವ್ಯವಸ್ಥೆಯು ಈ ಬಾರಿ 35,000 ಚದರ ಮೀಟರ್ ವ್ಯಾಪ್ತಿಗೆ ವಿಸ್ತರಿಸಿದೆ.

Join Whatsapp